Gruhalakshmi DBT Status : ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Gruhalakshmi DBT Status : ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗೃಹಲಕ್ಷ್ಮಿ  ಯೋಜನೆಯ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬೇಕಾದರೆ ನಾವು ನಿಮಗೆ ಈ ಕೆಳಗೆ ತಿಳಿಸಿರುವ ಹಂತಗಳ ಮೂಲಕ ನೀವು ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹಾಗಿದ್ದರೆ ಆ ಒಂದು ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಯೋಜನೆ ಈ ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ಮಾಡಲಾಗಿದೆ. ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂ ಗಳನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಅಷ್ಟೇ ಅಲ್ಲದೆ 1 ಕೋಟಿಗೂ ಹೆಚ್ಚು ಮಹಿಳೆಯರು ಈ ಒಂದು ಯೋಜನೆಯ ಲಾಭವನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ.

Gruhalakshmi DBT Status

ಹಾಗೆಯೆ ಗೃಹಲಕ್ಷ್ಮಿ ಯೋಜನೆಯ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ನಾವು ನಿಮಗೆ ಈ ಕೆಳಗೆ ನೀಡಿರುವ DBT ಸ್ಟೇಟಸ್ ಮೂಲಕ ನೀವು ಚೆಕ್ ಮಾಡಿಕೊಳ್ಳಬಹುದು. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣಗಳು ಎಲ್ಲಾ ಮಹಿಳೆಯರ ಖಾತೆಗಳಿಗೆ ಈಗಾಗಲೇ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದನ್ನು ಈ ರೀತಿಯಾಗಿ ತಿಳಿದುಕೊಳ್ಳಿ.

ಗೃಹಲಕ್ಷ್ಮಿ ಯೋಜನೆ ಚೆಕ್ ಮಾಡುವುದು ಹೇಗೆ ?

ನೀವು ಈ ಒಂದು ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಲು ಈ ಹಂತಗಳನ್ನು ಅನುಸರಿಸಿ.

  • ಈಗ ಮೊದಲಿಗೆ ನೀವು ಈ ಕೆಳಗೆ ನೀಡಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಆನಂತರ ಆ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಂಡು ಅಲ್ಲಿ ನಿಮ್ಮ ಆಧಾರ್ ಕಾರ್ಡನ್ನು ನೀವು ಎಂಟರ್ ಮಾಡಬೇಕಾಗುತ್ತದೆ.
  • ನೀವು ನಿಮ್ಮ ಆಧಾರ್ ಕಾರ್ಡನ್ನು ಎಂಟರ್ ಮಾಡಿದ ನಂತರ ಗೇಟ್ ಒಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಫಲಾನುಭವಿ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರಿಗೆ ಒಂದು ಒಟಿಪಿ ಬರುತ್ತದೆ. ನೀವು ಅದನ್ನು ಓಟಿಪಿ ಎಂಟರ್ ಮಾಡಿ ವೇರಿಫೈ ಮಾಡಬೇಕಾಗುತ್ತದೆ.
  • ಹಾಗೆ ಈಗ ಫಲಾನುಭವಿಗಳ ವೈಯಕ್ತಿಕ ವಿವರ ನಿಮ್ಮ ಮುಂದೆ ದೊರೆಯುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ಎಂಟರ್ ಮಾಡಲು ಕೇಳುತ್ತದೆ. ಆಗ ನೀವು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರನ್ನು ಸಲ್ಲಿಸಿ ಓಕೆ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  • ತದನಂತರ ನೀವು ಒಂದು MPIN ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ. MPIN ಕ್ರಿಯೇಟ್ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ನಿಮ್ಮ ಮುಂದೆ ಅಲ್ಲಿ ಆಯ್ಕೆಗಳು ದೊರೆಯುತ್ತದೆ. ನೀವು ಅದರಲ್ಲಿ ನಿಮ್ಮ ಆಡ್ ಮಾಡಿರುವಂತಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ನೀವು ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡ ನಂತರ ಅಲ್ಲಿ ಕ್ರಿಯೇಟ್ ಮಾಡಿದಂತಹ MPIN ಎಂಟರ್ ಮಾಡಿ ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ಅದರಲ್ಲಿ ಮೊದಲ ಆಯ್ಕೆಯಾದಂತಹ ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ನೀವು ಗೃಹಲಕ್ಷ್ಮಿ  DBT ಸ್ಟೇಟಸ್ ಚೆಕ್ ಮಾಡುವ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಅಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀವು ಅದರಲ್ಲಿ ತಿಳಿದುಕೊಳ್ಳಬಹುದು.

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಹಂತಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸಿಕೊಂಡು ನೀವು ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದು. ಈ  ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

ಈ ನಮ್ಮ "ಕರ್ನಾಟಕ ಸೇವಾ ಸಿಂಧು" ಜಾಲತಾಣದ ಮೂಲಕ ರಾಜ್ಯದ ಜನತೆಗೆ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು, ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಸುದ್ದಿಗಳ ಬಗ್ಗೆ ತಿಳಿಸಲಾಗುವುದು...

Sharing Is Caring:

Leave a Comment