Union Bank Recruitment 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದಲ್ಲಿ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ, ಹೌದು ಎಂದಾದರೆ ನಿಮಗೆ ಒಂದು ಒಳ್ಳೆಯ ಅವಕಾಶ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಹಲವು ವಾಣಿಜ್ಯ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಎಂದರೆ ಅದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂದು ಹೇಳಬಹುದು ಈ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯಲ್ಲಿ (Union Bank Recruitment 2024) ಸುಮಾರು 1500 ಖಾಲಿ ಹುದ್ದೆಗಳಿಗೆ ಆಸಕ್ತಿ ಮತ್ತು ಅರ್ಹತೆಯುಳ್ಳ ಎಲ್ಲಾ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ವಿವಿಧ ಹುದ್ದೆಗಳಿಗೆ ಅಧಿಕೃತವಾದ ಅದಿಸೂಚನೆಯನ್ನು ಹೊರಡಿಸಲಾಗಿದೆ. ಈ ಒಂದು ಬ್ಯಾಂಕಿಂಗ್ ನೇಮಕಾತಿಯಲ್ಲಿ ಸುಮಾರು 1500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಮತ್ತು ಅರ್ಹತೆ ಇರುವ ಎಲ್ಲಾ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ವಿವರಗಳು ಈ ಕೆಳಗಿನಂತಿವೆ.
Union Bank Recruitment 2024
- ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI)
- ಒಟ್ಟು ಹುದ್ದೆಗಳ ಸಂಖ್ಯೆ : 1500 ಹುದ್ದೆಗಳು
- ಉದ್ಯೋಗ ಮಾಡುವ ಸ್ಥಳ : ಭಾರತಾದ್ಯಂತ
- ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ
- ವಿದ್ಯಾರ್ಹತೆ : ಪದವಿ (Degree)
- ಅರ್ಜಿಯ ಪ್ರಾರಂಭದ ದಿನಾಂಕ : 24 ಅಕ್ಟೋಬರ್ 2024
- ಅರ್ಜಿಯ ಕೊನೆಯ ದಿನಾಂಕ : 13 ನವೆಂಬರ್ 2024
ವಿದ್ಯಾರ್ಹತೆ ವಿವರ:
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಅಧಿಕೃತ ಅದಿಸೂಚನೆಯ ಪ್ರಕಾರ ಹೇಳುವುದಾದರೆ ಅಭ್ಯರ್ಥಿಯು ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿಯನ್ನ ಪೂರ್ಣಗೊಳಿಸಬೇಕು/ಪಾಸಾಗಿರಬೇಕು.
ವಯೋಮಿತಿ ವಿವರ:
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಯಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷವಾಗಿರಬೇಕು ಮತ್ತು ಗರಿಷ್ಠ 30 ವರ್ಷಗಳ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
- ಮೊದಲಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.
- ಪರೀಕ್ಷೆಯಲ್ಲಿ ಪಾಸಾದ ನಂತರ ಅಭ್ಯರ್ಥಿಗಳಿಗೆ ಸಂದರ್ಶನ ಮಾಡಲಾಗುವುದು.
- ಸಂದರ್ಶನವಾದ ನಂತರ ಸ್ಥಳೀಯ ಭಾಷಾ ಪರೀಕ್ಷೆ ಮಾಡಲಾಗುವುದು.
- ಇದಾದ ನಂತರ ದಾಖಲೆ ಪರಿಶೀಲನೆ ನಡೆಸಲಾಗುವುದು.
- ಎಲ್ಲಾ ಮುಗಿದ ನಂತರ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅರ್ಹತೆಯುಳ್ಳ ಅಭ್ಯರ್ಥಿಯನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಈ ಒಂದು ಹುದ್ದೆಗಳಿಗೆ ತಮ್ಮ ಅಜ್ಜಿಯ ಫಾರಂ ಅನ್ನು ಭರ್ತಿ ಮಾಡುವ ಮೂಲಕ ಅಲ್ಲಿ ಹೇಳಲಾಗಿರುವ ಎಲ್ಲ ದಾಖಲೆ ಗಳನ್ನು ಅಪ್ಲೋಡ್ ಮಾಡಿ ನಂತರ ತಮ್ಮ ಎಲ್ಲ ವಿವರಗಳನ್ನು ಭರ್ತಿ ಮಾಡುವ ಮೂಲಕ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ನಿಮಗೆ ಈ ಹುದ್ದೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಆಸಕ್ತಿ ಇದ್ದರೆ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ಓದುವುದು ಸೂಕ್ತವೆಂದು ಹೇಳಬಹುದು.